ಕಲಬುರ್ಗಿ: ಶಿಕ್ಷಕನ ಮಗ 10 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
10 ವರ್ಷದ ವಿದ್ಯಾರ್ಥಿ ಸುದರ್ಶನ್ ನನ್ನು ಶಾಲಾ ಬಸ್ ಗೆ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಅಪಹರಿಸಿದ್ದರು. ಬಳಿಕ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಮಾಹಿತಿ ತಿಳಿದ ಪೊಲೀಸರು ಬಾಲಕ ಸುದರ್ಶನ್ ನನ್ನು ರಕ್ಷಿಸಿದ್ದರು. ಆದರೆ ಆರೋಪಿಗಳು ಪರಾರಿಯಾಗಿದ್ದರು.
ಅಪಹರಣಕಾರರ ಬಂಧನಕ್ಕಾಗಿ ತೀವ್ರ ಶೋಧ ನಡೆಸಿದ್ದ ಪೊಲಿಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಭಜಂತ್ರಿ, ಲಕ್ಷ್ಮಣ ಭಜಂತ್ರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಕಲಬುರ್ಗಿ ನಗರದ ಸಂತ್ರಸವಾಡಿ ನಿವಾಸಿಗಳು ಎಂದು ತಿಳಿದುಬಂದಿದೆ.