HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕದ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 228 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,714 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,503 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,46,330 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 46,450 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,12,80,212 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,99,731 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular