
ಸರಣಿ ಅಪಘಾತದಲ್ಲಿ ಒಂದರ ಹಿಂದೊಂದರಂತೆ ಒಟ್ಟು 7 ಕಾರುಗಳು ನುಜ್ಜುಗುಜ್ಜಾಗಿವೆ. ಏರ್ ಪೋರ್ಟ್ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿ ವಾಹನ ಸವಾರರು ಪರದಾಡಿದ್ದಾರೆ.
ಅಪಘಾತದಲ್ಲಿ BMW, ಥಾರ್, ಇಟಿಯೋಸ್ ಸೇರಿ ಐಷಾರಾಮಿ ಕಾರುಗಳು ಜಖಂಗೊಂಡಿದ್ದು, ಹಲವರಿಗೆ ಗಾಯಗಳಾಗಿವೆ. ಟಿಪ್ಪರ್ ಚಾಲಕ ರಸ್ತೆಯಲ್ಲಿಯೇ ಟಿಪ್ಪರ್ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಪೊಲೀಸರು ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

