
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿರುವ ಎನ್ ಐ ಎ ಅಧಿಕಾರಿಗಳು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ದಾಳಿ ನಡೆಸಿದ್ದು, ಓರ್ವ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಹೊನ್ನಾಳಿ ನಿವಾಸಿ ನದೀಮ್ ಎಂಬಾತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ನದೀಮ್ ಶಿವಮೊಗ್ಗ ಮೂಲದ ಶಂಕಿತ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

