HomeKarnatakaವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಂಜಿನಿಯರ್ ಜಗದೀಶ್ ಗೆ ಬೆಂಗಳೂರಿನ ಒಂದನೇ ಎಂಎಂಟಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಜಗದೀಶ್ ವಿಧಾನಸೌಧ ಆವರಣದಲ್ಲಿ 10.5 ಲಕ್ಷ ರೂ. ಸಿಕ್ಕಿಬಿದ್ದಿದ್ದು ಅವರನ್ನು ಬಂಧಿಸಲಾಗಿತ್ತು. ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾದ ನಂತರ ಪರಾರಿಯಾಗಿದ್ದ ಜಗದೀಶ್ ನಂತರ ವಿಚಾರಣೆಗೆ ಆಗಮಿಸಿದ್ದು ಅವರನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿಧಾನಸೌಧದಲ್ಲಿ ಇಷ್ಟೊಂದು ನಗದು ಪತ್ತೆಯಾಗಿರುವ ವಿಚಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular