HomeKarnatakaನೂರು ಜನ್ಮ ಎತ್ತಿ ಬಂದರೂ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ ಸವಾಲ್

ನೂರು ಜನ್ಮ ಎತ್ತಿ ಬಂದರೂ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ ಸವಾಲ್

ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಭರ್ಜರಿಯಾಗಿ ಸಂಘಟನೆ, ಪ್ರಚಾರ ಆರಂಭಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯ ಮುಖಂಡರು ಸಿಬಿಐ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಛೂ ಬಿಟ್ಟಿದ್ದಾರೆ ಎಂದು ಹೇಳಿದ ಅವರು, ನೂರು ಜನ್ಮ ಎತ್ತಿ ಬಂದರೂ ತಮ್ಮ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಂಧನೂರಿನಲ್ಲಿ ಕಾರ್ಯಕರ್ತರ ಬೃಹತ್ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2018ರಲ್ಲಿಯೇ ನಾನು ಪಕ್ಷ ಸ್ಥಾಪನೆಗೆ ಯೋಜನೆ ಹಾಕಿಕೊಂಡಿದ್ದೆ. ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರಿಂದ ಅವರ ಸ್ಥಾನಕ್ಕೆ ಅಡ್ಡಿಯಾಗುತ್ತೇನೆ ಎಂದು ಹಿಂದೆ ಸರಿದಿದ್ದೆ. ನಾನು ಕಷ್ಟಪಟ್ಟು ದುಡಿದು ಹಣ ಸಂಪಾದಿಸಿ ಆಸ್ತಿ ಮಾಡಿದ್ದೇನೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಮುಖಂಡರು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದಂತೆ ಬಿಜೆಪಿ ಸರ್ಕಾರ ಮತ್ತೆ ದಾಳಿ ನಡೆಸುವ ಭಯ ತೋರಿಸುತ್ತಿದೆ ಎಂದು ದೂರಿದ ಅವರು, ರಾಜ್ಯದ ಕಲ್ಯಾಣಕ್ಕಾಗಿ ಹೊಸ ಪಕ್ಷ ಸ್ಥಾಪಿಸಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular