HomeKarnatakaBREAKING: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರದಿಂದ ನಿರಾಕರಣೆ

BREAKING: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರದಿಂದ ನಿರಾಕರಣೆ

ಈ ಬಾರಿ ನವ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ಇತರ ರಾಜ್ಯಗಳಿಗೆ ಅವಕಾಶ ಕೊಡುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರ ಈ ಬಾರಿ ನಾರಿ ಶಕ್ತಿ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲು ಸಿದ್ಧತೆ ನಡೆಸಿದ್ದು, ಆದರೆ ಅಂತಿಮ ಹಂತದಲ್ಲಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ.

ಕಳೆದ 13 ವರ್ಷಗಳಿಂದಲೂ ನಿರಂತರವಾಗಿ ಕರ್ನಾಟಕ ಸರ್ಕಾರ ಸ್ತಬ್ಧ ಚಿತ್ರ ಪ್ರದರ್ಶನ ಮಾಡಿಕೊಂಡು ಬಂದಿದ್ದು, ಆದರೆ ಈ ಬಾರಿ ಅವಕಾಶ ಸಿಕ್ಕಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಅವಕಾಶ ನೀಡದಿದ್ದರೆ ರಾಜ್ಯದಾದ್ಯಂತ ಧರಣಿ ನಡೆಸಲಾಗುವುದು ಎಂದು ಪ್ರವೀಣ್ ಶೆಟ್ಟಿ ಬಣ ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular