HomeKarnatakaBIG NEWS: ಸ್ಯಾಂಟ್ರೋ ರವಿ ಶೀಘ್ರ ಬಂಧನ; ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ

BIG NEWS: ಸ್ಯಾಂಟ್ರೋ ರವಿ ಶೀಘ್ರ ಬಂಧನ; ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ

ಮೈಸೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿಯನ್ನು ಶೀಘ್ರದಲ್ಲಿಯೇ ಬಂಧಿಸುವುದಾಗಿ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ವರದಕ್ಷಿಣೆ ಕಿರುಕುಳ, ವಂಚನೆ,ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು ಮೈಸೂರು ಪೊಲೀಸರು ಆತನಿಗಾಗಿ ಶೋಧ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಸ್ಯಾಂಟ್ರೋ ರವಿ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಯಾಂಟ್ರೋ ರವಿ ವಿರುದ್ಧ ವಿಜಯನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸ್ಯಾಂಟ್ರೋ ರವಿ 2ನೇ ಪತ್ನಿ ದೂರು ದಾಖಲಿಸಿದ್ದಾರೆ. ಆತನ ಕುರಿತು ಅಗತ್ಯ ದಾಖಲೆಗಳನ್ನು ಹುಡುಕಾಡುತ್ತಿದ್ದೇವೆ. ಆತನನ್ನು ಶೀಘ್ರದಲ್ಲಿಯೇ ಬಂಧಿಸುವುದಾಗಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular