ಚಿತ್ರದುರ್ಗ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಸಂಪುಟ ಸೇರ್ಪಡೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಜಿಲ್ಲಾವಾರು, ಪ್ರಾದೇಶಿಕವಾರು, ಸಾಮಾಜಿಕ ಎಲ್ಲ ವಿಚಾರವೂ ಚರ್ಚೆಯಲ್ಲಿದೆ ಎಂದು ಹೇಳಿದರು.