ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 8 ತಾಲ್ಲೂಕುಗಳಲ್ಲಿ ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ, ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಸಿರಿವಾರ, ಉಡುಪಿ ಜಿಲ್ಲೆಯ ಕಾಪು, ವಿಜಯಪುರ ಜಿಲ್ಲೆಯ ಬಬಲೇಶ್ವರ, ತಿಕೋಟಾ ಮತ್ತು ತಾಳಿಕೋಟೆ ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಆರಂಭಿಸಲು ಆದೇಶಿಸಲಾಗಿದೆ.
ಪ್ರತಿ ಉಪ ನೋಂದಣಾಧಿಕಾರಿ ಕಚೇರಿಗೆ ತಲಾ 4 ಹುದ್ದೆಗಳಂತೆ ಒಟ್ಟು 32 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಉಪ ನೋಂದಣಾಧಿಕಾರಿ, ಪ್ರಥಮ ದರ್ಜೆ ಸಹಾಯಕ, ಡಾಟಾ ಎಂಟ್ರಿ ಆಪರೇಟರ್, ಡಿ ಗ್ರೂಪ್ ಹುದ್ದೆಯನ್ನು ಸೃಷ್ಟಿಸಿ ಆದೇಶ ಹೊರಡಿಸಲಾಗಿದೆ.