ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಿದೆ.
ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬಹುದು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ. ಆದ ಕಾರಣ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಇ-ಕೆವೈಸಿ ಮಾಡಸದಿರುವ ರೈತರಿಗೆ ಮುಂದಿನ 13ನೇ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.