HomeKarnatakaBIG NEWS: ವಿಧಾನಸಭೆ ಚುನಾವಣೆಗೆ ಕೋಲಾರದಿಂದ ಸ್ಪರ್ಧೆ ಬಗ್ಗೆ ನಾಳೆ ಸಿದ್ಧರಾಮಯ್ಯ ಘೋಷಣೆ ಸಾಧ್ಯತೆ

BIG NEWS: ವಿಧಾನಸಭೆ ಚುನಾವಣೆಗೆ ಕೋಲಾರದಿಂದ ಸ್ಪರ್ಧೆ ಬಗ್ಗೆ ನಾಳೆ ಸಿದ್ಧರಾಮಯ್ಯ ಘೋಷಣೆ ಸಾಧ್ಯತೆ

ಕೋಲಾರ: ನಾಳೆ ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಮಾರಂಭ ನಡೆಯುವ ಸ್ಥಳವನ್ನು ಮಾಜಿ ಸಚಿವ ರಮೇಶ್ ಕುಮಾರ್ ಪರಿಶೀಲಿಸಿದ್ದಾರೆ. ಕೋಲಾರದ ಕುರುಬರಪೇಟೆಯ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ವೇದಿಕೆ ನಿರ್ಮಾಣ ಮಾಡಿ ಪೆಂಡಾಲ್ ಹಾಕಲಾಗಿದೆ. ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳಿನ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರಿಗೆ ಕೋಲಾರದ ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ. ನಾಳೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular