
ಹಾವೇರಿ: ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. ಇದಕ್ಕಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ಸಮ್ಮೇಳನ ಮಾಡಲಾಗಿದೆ. ಆಮಂತ್ರಣ ಪತ್ರಿಕೆ ನೋಡಿದರೆ ಅದು ಸತ್ಯ ಎನ್ನಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು ತಪ್ಪನ್ನು ತಿದ್ದಿಕೊಳ್ಳುವ ಕೆಲಸ ಮಾಡಬೇಕು ಎಂದು ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.
ಬಿ.ಕೆ. ಹರಿಪ್ರಸಾದ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಹರಿಪ್ರಸಾದ್ ಅವರು, ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಟ್ಟಿದ್ದಾರೆ ಎಂದು ಹರಿಪ್ರಸಾದ್ ಹೇಳಿದ್ದಾರೆ. ಈ ಸಮ್ಮೇಳನದಲ್ಲಿ ಹೆಚ್ಚು ಮುಸ್ಲಿಮರಿಗೆ ಅವಕಾಶ ನೀಡಲಾಗಿದೆ. ನಾನು ಸಂತ ಶಿಶುನಾಳ ಶರೀಫರ ನಾಡಿನಲ್ಲಿ ನಿಂತಿದ್ದೇನೆ. ಶರೀಫರ ನಾಡಿನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡುತ್ತೇವೆಯೇ? ನಾವು ಧರ್ಮಧಾರಿತ, ಜಾತಿ ಆಧಾರಿತ ಸಮ್ಮೇಳನ ಮಾಡುತ್ತಿಲ್ಲ. ಇಲ್ಲಿ ಕನ್ನಡವೇ ಸಾರ್ವಭೌಮ. ನಾವು ಇಲ್ಲಿ ಮೊದಲು ಕನ್ನಡದವರಾಗಿ ಸಮ್ಮೇಳನ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.