HomeKarnatakaಮತ್ತೆ ರಾಜಕೀಯ ಗಲಾಟೆ: ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಿಂದ ತಡೆ...

ಮತ್ತೆ ರಾಜಕೀಯ ಗಲಾಟೆ: ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಿಂದ ತಡೆ ಕೋರಿ ಠಾಣೆಗೆ ದೂರು

ಬೆಂಗಳೂರು: ಬಿಜೆಪಿಯಿಂದ ಮತ್ತೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದು, ಇಂದು ಬೆಂಗಳೂರಿನಲ್ಲಿ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಲಾಗುವುದು.

ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಪುಸ್ತಕ ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದೆ. ಬೆಂಗಳೂರಿನ ಪುರ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸಚಿವ ಅಶ್ವಥ್ ನಾರಾಯಣ ಪುಸ್ತಕ ಬಿಡುಗಡೆ ಮಾಡುವರು. ‘ಸಿದ್ದು ನಿಜ ಕನಸುಗಳು’ ಪುಸ್ತಕ ರಾಜಕೀಯ ಗಲಾಟೆ ಸೃಷ್ಟಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಆಡಳಿತದಲ್ಲಿ ಹಿಂದೂ ಸಮಾಜವನ್ನು ನಡೆಸಿಕೊಂಡ ರೀತಿ ವಿಷಯವನ್ನು ಹೈಲೈಟ್ ಮಾಡಿ ಪುಸ್ತಕ ಹೊರತರುವ ನಿರೀಕ್ಷೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದ್ದು, ಪುಸ್ತಕ ಬಿಡುಗಡೆ ಮಾಡದಂತೆ ಕೆಪಿಸಿಸಿ ಕಾನೂನು ವಿಭಾಗದಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬೆಂಗಳೂರಿನ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶ ಇದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪುಸ್ತಕ ಬಿಡುಗಡೆಯನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಕಾನೂನು ವಿಭಾಗ ಪೊಲೀಸರಿಗೆ ಮನವಿ ಮಾಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular