HomeKarnatakaBIG NEWS: ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ ಕೇಸ್; ತೀವ್ರಗೊಂಡ ಪ್ರತಿಭಟನೆ; ನಾಳೆ ಸಾಗರ...

BIG NEWS: ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ ಕೇಸ್; ತೀವ್ರಗೊಂಡ ಪ್ರತಿಭಟನೆ; ನಾಳೆ ಸಾಗರ ಪಟ್ಟಣ ಬಂದ್ ಗೆ ಕರೆ

ಸಾಗರ: ಹಾಡಹಗಲೇ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದ್ದು, ಆರೋಪಿ ಬಂಧನಕ್ಕೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸಾಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿ ಸಮೀರ್ ಬಂಧನಕ್ಕೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ನಾಳೆ ಸಾಗರ ಪಟ್ಟಣ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಸಾಗರ ಪಟ್ಟಣದಲ್ಲಿ ಹಾಡಹಗಲೇ ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬುವವರ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದು, ಸುನೀಲ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular