HomeIndiaBIG NEWS: ಒಂದೇ ದಿನದಲ್ಲಿ 170 ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 170 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಭೀತಿ ನಡುವೆಯೇ ಕಳೆದ 24 ಗಂಟೆಯಲ್ಲಿ 170 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

24 ಗಂಟೆಯಲ್ಲಿ ಕೋವಿಡ್ ಮಹಾಮಾರಿಗೆ ಓರ್ವರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30721 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,371 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,47,002 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 10,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,14,06,483 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 85,282 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular