HomeLatest Newsಶ್ರೀಲಂಕಾ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದ ವೇಗಿ ಜಸ್ಪೀತ್ ಬೂಮ್ರಾ

ಶ್ರೀಲಂಕಾ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದ ವೇಗಿ ಜಸ್ಪೀತ್ ಬೂಮ್ರಾ

ಮುಂಬರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ (ಒಡಿಐ) ಸರಣಿಯಿಂದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬೂಮ್ರಾ ಇನ್ನೂ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಕಾರಣ ಟೂರ್ನಿಯಿಂದ ಹೊರಗಿರುವುದಾಗಿ ಬಿಸಿಸಿಐ ತಿಳಿಸಿದೆ.

ಬೂಮ್ರಾ, ಕಳೆದ ವರ್ಷ ತವರಿನಲ್ಲಿ ಆಸ್ಟ್ರೇಲಿಯಾ ಟಿ 20 ಪಂದ್ಯಗಳಿಂದ ಬೆನ್ನಿನ ಮೇಲಿನ ಒತ್ತಡದಿಂದ ಹೊರಗುಳಿದಿದ್ದಾರೆ. ಅದಾಗ್ಯೂ ಜನವರಿ 10 ರಿಂದ ಪ್ರಾರಂಭವಾಗುವ ಅಂತರಾಷ್ಟ್ರೀಯ ಏಕದಿನ ಪಂದ್ಯದ ಸರಣಿಗಾಗಿ ಅವರನ್ನು ತಂಡದಲ್ಲಿ ಹೆಸರಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ಪಂದ್ಯಗಳ ಸರಣಿಯ ಮೊದಲ ODI ಜನವರಿ 10 ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಎರಡನೇ ಪಂದ್ಯ ಜನವರಿ 12 ರಂದು,  ಮೂರನೇ ODI ಜನವರಿ 15 ರಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಜಯ ಸಾಧಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular