HomeKarnatakaರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ...

ರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ

ಮೈಸೂರು: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಇನ್ನು ಮುಂದೆ ಟೆಂಡರ್ ಕರೆಯುವುದಿಲ್ಲ. ಹೊಸದಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಾನಸಗಂಗೋತ್ರಿ ಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗಿಯ ಮಟ್ಟದ ಫಲಾನುಭವಿಗಳಿಗೆ ಅರಿವು ಕಾರ್ಯಾಗಾರ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ಸೆಟ್ ಮೊದಲಾದ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಇದರ ಬಗ್ಗೆ ಅನೇಕ ದೂರುಗಳು ಬಂದಿದ್ದು, ಟೆಂಡರ್ ಪದ್ಧತಿ ಕೈ ಬಿಟ್ಟು ಫಲಾನುಭವಿಗಳಿಗೆ ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ಈ ಹಣದಲ್ಲಿ ಬೋರ್ವೆಲ್ ಕೊರೆಸುವುದು, ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲಾ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಅಲ್ಲದೇ ಯೋಜನೆಯಡಿ ಅರ್ಜಿದಾರರ ವಯಸ್ಸು 60 ವರ್ಷದ ಮೇಲಿರಬೇಕು ಎನ್ನುವ ನಿರ್ಬಂಧವನ್ನು ಕೈ ಬಿಡಲಾಗಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಸಕ್ತ ವರ್ಷದಲ್ಲಿ 1,700 ಕೊಳವೆ ಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular