HomeKarnatakaBIG NEWS: ಬೆಂಗಳೂರಿನಲ್ಲಿ ಘೋರ ದುರಂತ; ಮೆಟ್ರೋ ಪಿಲ್ಲರ್ ರಾಡ್ ಬಿದ್ದು ಗಾಯಗೊಂಡಿದ್ದ ತಾಯಿ -...

BIG NEWS: ಬೆಂಗಳೂರಿನಲ್ಲಿ ಘೋರ ದುರಂತ; ಮೆಟ್ರೋ ಪಿಲ್ಲರ್ ರಾಡ್ ಬಿದ್ದು ಗಾಯಗೊಂಡಿದ್ದ ತಾಯಿ – ಮಗು ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಪಿಲ್ಲರ್ ನಿರ್ಮಿಸಲು ಕಟ್ಟಿದ್ದ ಕಬ್ಬಿಣದ ರಾಡ್ ಗಳು ಬೈಕ್ ಸವಾರರ ಮೇಲೆ ಬಿದ್ದು, ತಾಯಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಗಳು ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದ್ದಿದೆ. ಪತಿ, ಪತ್ನಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಲ್ಟಿಯಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹಾಗೂ ಮಗು ಸಾವನ್ನಪ್ಪಿದ್ದಾರೆ.

28 ವರ್ಷದ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದಾರೆ. ಗಾಯಾಳು ತಂದೆಯ ಸ್ಥಿತಿಯೂ ಗಂಭೀರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular