
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೂ ಆದೇಶಿಸಲಾಗಿದೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿತ್ತು. ಆದರೆ ಇದೆಲ್ಲವೂ ಕಾಂಗ್ರೆಸ್ ಅವಧಿಯಲ್ಲಿ ನಡೆದಿದ್ದು. ಆತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಬಿಡುಗಡೆಯಾಗಿದ್ದ. ಆತನಿಗೆ 20 ವರ್ಷಗಳ ಇತಿಹಾಸವಿದೆ. ಈ ಸಂದರ್ಭಗಳಲ್ಲಿ ಯಾರ ಯಾರ ಸರ್ಕಾರ ಇತ್ತು, ಯಾವ ಯಾವ ಮಂತ್ರಿಗಳಿದ್ದರು, ಆತನಿಗೆ ಯಾರ ಜೊತೆ ಸಂಬಂಧವಿತ್ತು ಎಲ್ಲವೂ ತನಿಖೆಯಾಗಲಿದೆ ಎಂದರು.
ಸಂಪೂರ್ಣ ತನಿಖೆ ಬಳಿಕ ಸತ್ಯ ಹೊರಬರಲಿದೆ. ಈಗಾಗಲೇ ಆತನಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

