20 ವರ್ಷದ ಅವಿವಾಹಿತ ಯುವತಿ ನವಜಾತ ಶಿಶುವಿಗೆ ಜನ್ಮ ನೀಡಿದ ಬಳಿಕ ಕಟ್ಟಡದಿಂದ ಎಸೆದ ಪರಿಣಾಮ ಮಗು ಸಾವನ್ನಪ್ಪಿರೋ ಘಟನೆ ದೆಹಲಿಯಲ್ಲಿ ನಡೆದಿದೆ.
ಅವಿವಾಹಿತ ಯುವತಿ ತನ್ನ ಅಪಾರ್ಟ್ಮೆಂಟ್ ನ ವಾಶ್ ರೂಂನ ಕಿಟಕಿಯಿಂದ ಎಸೆದ ನಂತರ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆಯ ಸಮಯದಲ್ಲಿ, ಸಾಮಾಜಿಕ ಕಳಂಕಕ್ಕೆ ಹೆದರಿ ತನ್ನ ಮಗುವನ್ನು ಸಾಯಿಸಲು ನಿರ್ಧರಿಸಿದ್ದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ದೆಹಲಿಯ ನ್ಯೂ ಅಶೋಕ್ ನಗರದ ಜೈ ಅಂಬೇ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನೋಯ್ಡಾದಲ್ಲಿ ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ನವಜಾತ ಶಿಶು ಎತ್ತರದಿಂದ ಬಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದ ನಂತರ ಎಎಸ್‌ಐ ಸ್ಥಳಕ್ಕಾಗಮಿಸಿದಾಗ ಸಾರ್ವಜನಿಕರು ಮಗುವನ್ನು ನೋಯ್ಡಾದ ಮೆಟ್ರೋ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆ ವೇಳೆಗೆ ಮಗು ಸತ್ತಿದೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ವ್ಯಾಪಕ ವಿಚಾರಣೆ ನಡೆಸಲಾಗಿದ್ದು, ಮಗು ಪತ್ತೆಯಾದ ಸ್ಥಳದ ಸುತ್ತಮುತ್ತಲಿನ ಹಲವಾರು ಮನೆಗಳನ್ನು ಪರಿಶೀಲಿಸಲಾಗಿದೆ ಮತ್ತು ನಿವಾಸಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಮನೆಯನ್ನು ಪರಿಶೀಲಿಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಡಸ್ಟ್ ಬಿನ್‌ನಲ್ಲಿ ರಕ್ತದ ಕುರುಹುಗಳು ಕಂಡುಬಂದಿವೆ. ಮನೆಯ ನಿವಾಸಿಗಳನ್ನು ವಿಚಾರಣೆಗೆ ಒಳಪಡಿಸಲಾಯಿತು ಮತ್ತು 20 ವರ್ಷದ ಯುವತಿ ತನಿಖೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿ ವಾಶ್ ರೂಂನ ಕಿಟಕಿಯಿಂದ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಆರೋಪಿಯನ್ನ ಆಂತರಿಕ ವೈದ್ಯಕೀಯ ಪರೀಕ್ಷೆಗಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅವಳು ಅವಿವಾಹಿತೆ ಎಂದು ಬಹಿರಂಗಪಡಿಸಿದ್ದಾಳೆ. ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302/201 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.