ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶರಾಗಿದ್ದಾರೆ. 86 ವರ್ಷದ ಸಾರಾ ಅಬೂಬಕ್ಕರ್ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಇಂದು ನಿಧನರಾಗಿದ್ದಾರೆ.
ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮವೊಂದರಲ್ಲಿ ಜನಿಸಿದ್ದ ಸಾರಾ ಅಬೂಬಕ್ಕರ್ ಅವರ ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದೂರಿನಲ್ಲಿ ನಡೆಯಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ.
ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅವರಿಗೆ ಸಂದಿವೆ.