
ಕೊರೊನಾ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ರಮೇಶ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
2022ರ ಜನವರಿಯಲ್ಲಿ ಎನ್.ಆರ್.ರಮೇಶ್ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್.ಆರ್.ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

