alex Certify ಈ ಜಿಲ್ಲೆಯ ಜನತೆಗೆ ಭರ್ಜರಿ ಗುಡ್‌ ನ್ಯೂಸ್:‌ ಇಂದಿನಿಂದಲೇ ಜಿಯೋ 5ಜಿ ಸೇವೆ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಜಿಲ್ಲೆಯ ಜನತೆಗೆ ಭರ್ಜರಿ ಗುಡ್‌ ನ್ಯೂಸ್:‌ ಇಂದಿನಿಂದಲೇ ಜಿಯೋ 5ಜಿ ಸೇವೆ ಲಭ್ಯ

ಬೆಂಗಳೂರು: ರಿಲಯನ್ಸ್ ಜಿಯೋ ಇಂದು (ಜನವರಿ 10) ಹುಬ್ಬಳ್ಳಿ- ಧಾರವಾಡ ಅವಳಿ ನಗರ, ಮಂಗಳೂರು, ಬೆಳಗಾವಿಯಲ್ಲಿ ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಮತ್ತು ಇಂದೇ ಇತರ ರಾಜ್ಯಗಳ ಪ್ರಮುಖ ನಗರಗಳಲ್ಲಿ ಟ್ರೂ 5ಜಿ ಸೇವೆಗಳ ಬಹು-ರಾಜ್ಯ ಬಿಡುಗಡೆ ಘೋಷಿಸಿದೆ. ಅಂದಹಾಗೆ ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.

ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಲು ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ ಇರುವ ಜಿಯೋ ಬಳಕೆದಾರರನ್ನು ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, “ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಗರದಲ್ಲಿ 5ಜಿ ಅನ್ನು ಹೊರತರಲು ನಾವು ಹೆಮ್ಮೆ ಪಡುತ್ತೇವೆ ಮತ್ತು ನಾವು ಟ್ರೂ 5 ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದ ನಂತರ ನಮ್ಮ ಅತಿದೊಡ್ಡ ಅನಾವರಣದಲ್ಲಿ ಇದೂ ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನ ರೂಪಾಂತರದ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ. “ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರಷ್ಟೇ ಅಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ.

“ಜಿಯೋ ಇಂಜಿನಿಯರ್‌ಗಳು ಟ್ರೂ-5ಜಿ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರಿಗೂ ತಲುಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರಿಂದ ನಮ್ಮ ಮಹಾನ್ ದೇಶದ ಪ್ರತಿ ನಾಗರಿಕರು ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅದ್ಭುತ ಪ್ರಯೋಜನಗಳನ್ನು ಅನುಭವಿಸಬಹುದು.

“ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ,” ಎಂದು ಅವರು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...