ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 3,57,539 ಪಿಹೆಚ್‍ಹೆಚ್(ಬಿಪಿಎಲ್) ಮತ್ತು 42,333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ(ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗಿತಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ(ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆಗೊಳಿಸಲಾಗಿದೆ.
ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಚಿತ್ರದುರ್ಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.