HomeKarnatakaBIG NEWS: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

BIG NEWS: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿರುವ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂಡೂಡಿದೆ.

ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಯಾಂಟ್ರೋ ರವಿ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಲ್ಲಿರುವ ಸ್ಯಾಂಟ್ರೋ ರವಿ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ. ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ ನೀಡಿ ನಾಳೆ ತಕರಾರು ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular