HomeCrimeBIG NEWS: ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

BIG NEWS: ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಮಜೀದ್ ಅಬ್ದುಲ್ ರೆಹಮಾನ್ ಹಾಗೂ ನದೀಮ್ ಅಹ್ಮದ್ ಬಂಧಿತ ಆರೋಪಿಗಳು. ಬಂಧಿತರು ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಟ್ರಯಲ್ ಬ್ಲಾಸ್ಟ್ ಪ್ರಕರಣ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ತನಿಖೆ ವೇಳೆ ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಐಸಿಸ್ ಒಳ ಸಂಚು ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular