HomeKarnatakaರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಮೋದಿ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಮೋದಿ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ನಾಳೆಯಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿ ನಗರದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪಿಯುಸಿ ಮತ್ತು ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ. ಪ್ರಧಾನಿ ಮೋದಿ ಅವರು ಆಗಮಿಸುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ. ಮುಂಜಾಗ್ರತೆ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ:12-01-2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಷಿಸಲಾಗಿದೆ. ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular