HomeIndiaವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿದೆ. ವಿಮಾನದಲ್ಲಿ ಮೂತ್ರ ವಿಸರ್ಜಿಸಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular