HomeKarnatakaBIG NEWS: ರೈಲ್ವೆ ನಿಲ್ದಾಣದಲ್ಲೇ ಸ್ವಾಮೀಜಿಗೆ ಹೃದಯಾಘಾತ; ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

BIG NEWS: ರೈಲ್ವೆ ನಿಲ್ದಾಣದಲ್ಲೇ ಸ್ವಾಮೀಜಿಗೆ ಹೃದಯಾಘಾತ; ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ: ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿ ಲಿಂಗೈಕ್ಯರಾದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸ್ವಾಮೀಜಿಯವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಿಂದ ಯಾದಗಿರಿಯ ಮಠಕ್ಕೆ ಸ್ವಾಮೀಜಿ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾದಿದ್ದರು. ಮುಂದಿನ ತಿಂಗಳು ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆಗೆ ಸಿದ್ಧತೆ ನಡೆಸಿದ್ದರು. ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ವಾಪಸ್ ಯಾದಗಿರಿಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular