HomeKarnatakaBIG NEWS: ಚುನಾವಣೆ ಹೊತ್ತಲ್ಲೇ ಜನಾರ್ಧನ ರೆಡ್ಡಿಗೆ ಬಿಗ್ ಶಾಕ್

BIG NEWS: ಚುನಾವಣೆ ಹೊತ್ತಲ್ಲೇ ಜನಾರ್ಧನ ರೆಡ್ಡಿಗೆ ಬಿಗ್ ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಚುನಾವಣಾ ಅಖಾಡಕ್ಕೆ ಧುಮುಕಿರುವ ಗಾಲಿ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸಿಬಿಐ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸಿತ್ತು. ಸಿಬಿಐ ಹೈಕೋರ್ಟ್ ಮೊರೆ ಹೋಗಿದ್ದ ಬೆನ್ನಲ್ಲೇ ಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ರಾಜ್ಯ ಗೃಹ ಇಲಾಖೆ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular