ನವದೆಹಲಿ: ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ. ಅದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇರುವುದಾಗಿ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಶೋಧ ನಡೆಸಲಾಗುತ್ತಿದೆ. ಇಂದು ಸಂಜೆ 6.30ಕ್ಕೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಬೇಕಿತ್ತು.
ಬಾಂಬ್ ಬೆದರಿಕೆಯ ಕುರಿತು ಕರೆ ಸ್ವೀಕರಿಸಿದ ವಿಮಾನಯಾನ ಅಧಿಕಾರಿಗಳು ಬೋರ್ಡಿಂಗ್ ಅನ್ನು ನಿಲ್ಲಿಸಿ ಬಾಂಬ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ವಿಮಾನವನ್ನು ಶೋಧಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.