ಶಿವಮೊಗ್ಗ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಭತ್ತದ ವ್ಯಾಪಾರಿ ರಜತಾದ್ರಯ್ಯ ಅವರ ಪುತ್ರ ಜಯಂತ್(16) ಮೃತಪಟ್ಟ ಬಾಲಕ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿರುವ ಜಯಂತ್ ಶಾಲೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆಯಲ್ಲಿ ಹಠಾತ್ ಎದೆ ನೋವು ಕಾಣಿಸಿಕೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದುಯಲಾಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.