HomeKarnatakaBIG NEWS: ವಿಧಾನಸೌಧದ ಎದುರು ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ; ಸಂತಸ ವ್ಯಕ್ತಪಡಿಸಿದ ಸಿಎಂ

BIG NEWS: ವಿಧಾನಸೌಧದ ಎದುರು ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ; ಸಂತಸ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ವಿಧಾನಸೌಧದ ಮುಂದೆ ಸಾಮಾಜಿಕ ಹರಿಕಾರ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜನರ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದ ಮುಂದೆ ಕನ್ನಡ ನಾಡಿನಲ್ಲಿ ಹುಟ್ಟಿ ಕ್ರಾಂತಿ ಮಾಡಿದ ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು ಸಂತಸದ ವಿಚಾರ. ಬಸವಣ್ಣನವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವೈಚಾರಿಕ ಪ್ರಗತಿ ಮಾಡಿ ಒಂದು ಆದರ್ಶಮಯ ನಾಡು ಕಟ್ಟಿಕೊಟ್ಟಿರುವ ನಾಯಕರು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಪೇಗೌಡರು ಊರು, ಕೇರಿಗಳನ್ನು ಕಟ್ಟಿ ಮಾದರಿಯಾದ ನಾಡು ಕಟ್ಟಿದ ಮಹಾನ್ ನಾಯಕರು. ಎರಡೂ ಮೂರ್ತಿಗಳನ್ನು ವಿಧಾನಸೌಧ ಮುಂಭಾಗ ಪ್ರತಿಷ್ಠಾಪನೆ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಬಹುದಿನಗಳ ಕನಸು ನನಸಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular