HomeKarnatakaBIG NEWS: ಶಾಲಾ ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

BIG NEWS: ಶಾಲಾ ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಮಂಗಳೂರು: ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮಂಜೇಶ್ವರಂ ವೀಯಪದವು ಬಳಿ ನಡೆದಿದೆ.

ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳಾದ 18 ವರ್ಷದ ಅಭಿಷೇಕ್ ಹಾಗೂ ಪ್ರೀತೇಶ್ ಮೃತರು. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ವಿದ್ಯಾರ್ಥಿಗಳು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಶಾಲಾ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆಗೆ ದಾಖಲಾಗಿರುವ ಮತ್ತೋರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular