HomeIndiaಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ ಸಹ-ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯಾಗಿರುವ ಶಂಕರ್ ಮಿಶ್ರಾ ಅವರು ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಹೇಳಿಕೆ ನೀಡಿ, ನಾನು ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಲಿಲ್ಲ. ಅವರು ಸ್ವತಃ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಿಶ್ರಾ ಅವರ ವಕೀಲರು ವಯಸ್ಸಾದ ಮಹಿಳೆ ತನ್ನ ಆರೋಗ್ಯದ ಕಾರಣದಿಂದ ಸ್ವತಃ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಪ್ರತಿಪಾದಿಸಿದರು. ಮಹಿಳೆಯು 30 ವರ್ಷಗಳಿಂದ ಭರತನಾಟ್ಯ ನರ್ತಕಿಯಾಗಿದ್ದು, ಅವರಿಗೆ ಮೂತ್ರದ ನಿಯಂತ್ರಣ ಇಲ್ಲ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಚಾರಣೆಗಾಗಿ ತನ್ನ ಕಸ್ಟಡಿಗೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಾಲಯ ನೀಡಿದ್ದ ನೋಟಿಸ್‌ ಗೆ ಮಿಶ್ರಾ ಅವರ ಉತ್ತರದ ವೇಳೆ ಈ ವಿಷಯ ತಿಳಿಸಲಾಗಿದೆ. ಕಳೆದ ವಾರ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಬುಧವಾರ ತಿರಸ್ಕರಿಸಲಾಗಿತ್ತು.

ನವೆಂಬರ್ 26 ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಸಹ-ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಮಿಶ್ರಾ ಮೇಲಿದೆ. ಈ ಸಂಬಂಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ ನಂತರ ಅವರನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಂಧಿಸಲಾಯಿತು. ವಿಷಯ ಬೆಳಕಿಗೆ ಬಂದಾಗಿನಿಂದ ಮಿಶ್ರಾ ತಲೆಮರೆಸಿಕೊಂಡಿದ್ದರು.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(DGCA) ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ನೀಡಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular