ರಾಜ್ಯ ರಾಜಕಾರಣ ಕುರಿತಂತೆ ಕುತೂಹಲ ಮೂಡಿಸಿದ ‘ಕೋಡಿ ಶ್ರೀ’ ಗಳ ಭವಿಷ್ಯ

ಇನ್ನು ಕೆಲ ತಿಂಗಳುಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮೂರೂ ಪ್ರಮುಖ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಚುನಾವಣೆ ಘೋಷಣೆಗೂ ಮುನ್ನವೇ ಪಕ್ಷಾಂತರ ಪರ್ವವೂ ಆರಂಭವಾಗಿದ್ದು, ಇದರ ಜೊತೆಗೆ ನಾಯಕರ ನಡುವೆ ಮಾತಿನ ಸಮರ ಮುಗಿಲು ಮುಟ್ಟಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಕೋಡಿಮಠದ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ನುಡಿದಿರುವ ಭವಿಷ್ಯ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯ ರಾಜಕೀಯದಲ್ಲಿ ಎಷ್ಟೇ ಗೊಂದಲಗಳಿದ್ದರೂ ಸಹ ಈ ಬಾರಿ ಸ್ಪಷ್ಟ ಬಹುಮತದಿಂದ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ 2023ರ ಕುರಿತು ಸ್ವಾಮೀಜಿಗಳು ಹೇಳಿರುವ ಮತ್ತೊಂದು ಭವಿಷ್ಯ ಆತಂಕ ಮೂಡಿಸಿದ್ದು, ಒಲೆ ಹೊತ್ತಿ ಉರಿದರೆ ನಿಲ್ಲಬಹುದು. ಅದರಿಂದ ಅಡುಗೆಯನ್ನು ಸಹ ಮಾಡಬಹುದು. ಆದರೆ ಭೂಮಿಯೇ ಹೊತ್ತಿ ಉರಿದರೆ ಯಾರಿಗೂ ನಿಲ್ಲಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಹಾಗೆಯೇ ಈ ವರ್ಷ ಎರಡು ಮೂರು ದೊಡ್ಡ ದೊಡ್ಡ ತಲೆಗಳು ಉರುಳಬಹುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read