HomeKarnatakaBIG NEWS: 2ನೇ ಪತ್ನಿ ದೂರಿನ ಮೇಲಷ್ಟೇ ಸ್ಯಾಂಟ್ರೋ ರವಿಯ ವಿಚಾರಣೆ ?

BIG NEWS: 2ನೇ ಪತ್ನಿ ದೂರಿನ ಮೇಲಷ್ಟೇ ಸ್ಯಾಂಟ್ರೋ ರವಿಯ ವಿಚಾರಣೆ ?

ಅತ್ಯಾಚಾರ, ವಂಚನೆ, ವೇಶ್ಯಾವಾಟಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಶುಕ್ರವಾರದಂದು ರಾಜ್ಯ ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿಯ ಎರಡನೇ ಪತ್ನಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಆತನ ಬಂಧನವಾಗಿದೆ.

ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು, ಇದರ ಮಧ್ಯೆ ಆತ ಪ್ರಭಾವಿಗಳ ಜೊತೆ ಸಂಪರ್ಕ ಸಾಧಿಸಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೂ ತೊಡಗಿಕೊಂಡಿರುವುದು ಬಯಲಾಗಿತ್ತು. ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಮೈಸೂರು ಪೊಲೀಸರು ಸ್ಯಾಂಟ್ರೋ ರವಿಯ ಎರಡನೇ ಪತ್ನಿ ದಾಖಲಿಸಿರುವ ವಂಚನೆ, ಅತ್ಯಾಚಾರ, ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿರುವುದು ಸೇರಿದಂತೆ ಆ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ನಂತರ ವರ್ಗಾವಣೆ ದಂಧೆಯ ಕುರಿತು ಮಾಹಿತಿ ಪಡೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular