HomeIndiaಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ಬಳಿಕ ವೇತನ ಹೆಚ್ಚಳ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ಬಳಿಕ ವೇತನ ಹೆಚ್ಚಳ

ನವದೆಹಲಿ: 2023 ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕೇಂದ್ರ ಬಜೆಟ್ 2023 ರ ನಂತರ ಸರ್ಕಾರಿ ನೌಕರರ ವೇತನದ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ವೇತನದ ಫಿಟ್‌ ಮೆಂಟ್ ಅಂಶವನ್ನು ಪರಿಷ್ಕರಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಿಟ್‌ ಮೆಂಟ್ ಅಂಶವನ್ನು ಬದಲಾಯಿಸುವಂತೆ ಕೇಂದ್ರ ನೌಕರರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಕುರಿತು ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದ್ದು, 2024ರ ಮೊದಲು ಇದನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಬಜೆಟ್ ನಂತರ 2023ರ ಮಾರ್ಚ್‌ನಲ್ಲಿ ಜಾರಿಗೆ ತರುವುದಾಗಿ ಘೋಷಿಸಬಹುದು ಎಂದು ಮೂಲಗಳು ಹೇಳಿವೆ.

ಫಿಟ್‌ ಮೆಂಟ್ ಶೇಕಡ 2.57 ರಷ್ಟಿದ್ದು, ನೌಕರರು ಫಿಟ್‌ ಮೆಂಟ್ ಅಂಶವನ್ನು 3.68 ಕ್ಕೆ ಹೆಚ್ಚಿಸಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಏರಿಕೆಯೊಂದಿಗೆ ಕನಿಷ್ಟ ವೇತನ ಪ್ರಸ್ತುತ 18,000 ರೂ.ನಿಂದ 26,000 ರೂ.ಗೆ ಹೆಚ್ಚಳವಾಗಲಿದೆ.

ಜನವರಿ 1 ರಿಂದ ಜಾರಿಗೆ ಬರುವಂತೆ ಮಾರ್ಚ್ 2023 ರಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಕೇಂದ್ರ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular