HomeKarnatakaಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ದೆಹಲಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ದೆಹಲಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಲವು ನಾಯಕರು ದೆಹಲಿಗೆ ತೆರಳಲಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗುವುದು. ಅಲ್ಲದೇ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನಗಳ ಕಾಲ ನಡೆಯುವ ಕಾರ್ಯಕಾರಿಣಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅವಧಿಯನ್ನು ವಿಸ್ತರಿಸಲು ಸಭೆಯಲ್ಲಿ ಅನುಮೋದನೆ ನೀಡಲಾಗುವುದು. ಕರ್ನಾಟಕ ಸೇರಿದಂತೆ ಈ ವರ್ಷ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಸಲಾಗುವುದು. ಪಕ್ಷ ಸಂಘಟನೆಯಲ್ಲಿ ಬದಲಾವಣೆ, ಲೋಕಸಭೆ ಚುನಾವಣೆ ಗೆಲುವಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular