HomeKarnatakaವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಟನನ್ನು ಪೊಲೀಸರು ಬಂಧಿಸಿದ್ದಾರೆ. ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ‘ನ್ಯೂರಾನ್’ ಚಿತ್ರದ ನಾಯಕ ನಟ ಮಂಜುನಾಥ್ ಅಲಿಯಾಸ್ ಸಂಜು ಬಂದಿತ ಆರೋಪಿಯಾಗಿದ್ದಾನೆ.

ಈತ ಚಿತ್ರರಂಗದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಆಪ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ‘ನ್ಯೂರಾನ್’ ಚಿತ್ರದ ಬಳಿಕ ಈತನಿಗೆ ಯಾವುದೇ ಅವಕಾಶ ಸಿಗದ ಹಿನ್ನೆಲೆಯಲ್ಲಿ ಇಂತಹ ಸಮಾಜಘಾತಕ ಕೃತ್ಯದಲ್ಲಿ ತೊಡಗಿದ್ದ ಎಂದು ಹೇಳಲಾಗಿದೆ.

ವಿಕಾಸ್ ಪುಷ್ಪಗಿರಿ ನಿರ್ದೇಶನದ ‘ನ್ಯೂರಾನ್’ ಚಿತ್ರದಲ್ಲಿ ಮಂಜುನಾಥ್ ಆಲಿಯಾಸ್ ಸಂಜು ನಾಯಕ್ ನಟನಾಗಿ ಕಾಣಿಸಿಕೊಂಡಿದ್ದ. ಸಾಕಷ್ಟು ಖರ್ಚು ಮಾಡಿ ಈ ಸಿನಿಮಾ ನಿರ್ಮಾಣವಾಗಿದ್ದರೂ ಸಹ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ವಿಫಲವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular