HomeKarnatakaBIG NEWS: ಶಿಕಾರಿಪುರ ಅಥವಾ ಹುಬ್ಬಳ್ಳಿ; ಶಕ್ತಿ ಪ್ರದರ್ಶನಕ್ಕೆ ಮುಂದಾದ ಪಂಚಮಸಾಲಿ ಸಮುದಾಯ

BIG NEWS: ಶಿಕಾರಿಪುರ ಅಥವಾ ಹುಬ್ಬಳ್ಳಿ; ಶಕ್ತಿ ಪ್ರದರ್ಶನಕ್ಕೆ ಮುಂದಾದ ಪಂಚಮಸಾಲಿ ಸಮುದಾಯ

ಬೆಂಗಳೂರು: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಮತ್ತೊಂದು ಸುತ್ತಿನ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಪಂಚಮಸಾಲಿ ಸಮುದಾಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಮಾತನಾಡಿದ ಸ್ವಾಮೀಜಿ, 2ಎ ಮೀಸಲಾತಿಗಾಗಿ ಎರಡು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಜನವರಿ ಅಂತ್ಯದಲ್ಲಿ ಹುಬ್ಬಳ್ಳಿ ಅಥವಾ ಶಿಕಾರಿಪುರದಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕ ಯತ್ನಾಳ್ ಗೆ ನೋಟೀಸ್ ವಿಚಾರವಾಗಿ ಮಾತನಾಡಿದ ಸ್ವಾಮೀಜಿ, ಯತ್ನಾಳ್ ಗೆ ಯಾವುದೇ ನೋಟಿಸ್ ಬಂದಿಲ್ಲ. ಈ ಬಗ್ಗೆ ಯತ್ನಾಳ್ ಅವರೇ ಸ್ಪಷ್ಟ ಪಡಿಸಿದ್ದಾರೆ. ಒಂದು ವೇಳೆ ನೋಟೀಸ್ ನೀಡಿದರೆ ಇಡೀ ಸಮುದಾಯ ಅವರ ಪರ ನಿಲ್ಲುತ್ತದೆ. ಅವರು ಯಾವುದೇ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವೆಲ್ಲರೂ ಯತ್ನಾಳ್ ಪರ ಇದ್ದೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular