ಬೆಂಗಳೂರು: ಬಾಲಬ್ರೂಯಿ ಗೆಸ್ಟ್ ಹೌಸ್ ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಆದರೆ ಈ ಹಿಂದೆ ಹೈಕೋರ್ಟ್ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಇದೀಗ ಹೈಕೋರ್ಟ್ ಬಾಲಬ್ರೂಯಿ ಅತಿಥಿ ಗೃಹದಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ ಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಇನ್ನು ಬಾಲಬ್ರೂಯಿ ಆವಣದಲ್ಲಿರುವ ಮರಗಳನ್ನು ಕಡಿಯುವುದಿಲ್ಲ. ಕಟ್ಟಡಕ್ಕೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ನಡೆಸಲಾಗುವುದು. ಗೆಸ್ಟ್ ಹೌಸ್ ನಿರ್ವಹಣೆಗೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ಗೆಸ್ಟ್ ಹೌಸ್ ನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಆಗಿ ಬಳಸಲಾಗುವುದು ಎಂದು ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ಹೈಕೋರ್ಟ್ ಗೆ ಮನವರಿಕೆ ಮಾಡಿದರು.