HomeIndiaVideo | ಬೀದಿನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿ ಮೇಲೆ ಹರಿದ ಕಾರ್

Video | ಬೀದಿನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿ ಮೇಲೆ ಹರಿದ ಕಾರ್

ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಯ ಮೇಲೆ ಕಾರ್ ಹರಿದಿರೋ ಘಟನೆ ಚಂಡೀಗಡದಲ್ಲಿ ನಡೆದಿದೆ.
25 ವರ್ಷದ ಯುವತಿ ತಡರಾತ್ರಿ ಬೀದಿ ನಾಯಿಗೆ ಆಹಾರ ನೀಡುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ತೇಜಸ್ವಿತಾ ಎಂಬ ಯುವತಿ ನಾಯಿಗೆ ಆಹಾರ ನೀಡುತ್ತಿರುವಾಗ, ಅತಿವೇಗದಲ್ಲಿ ಬಂದ ಕಾರು ಅವರ ಮೇಲೆ ಹರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿ ತೀವ್ರವಾಗಿ ಗಾಯಗೊಂಡಿದ್ದರೂ ಅಪಾಯದಿಂದ ಪಾರಾಗಿದ್ದಾಳೆ. ಆಕೆಯನ್ನು GMSH-16 ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವಳ ತಲೆಯ ಎರಡೂ ಬದಿಗಳಲ್ಲಿ ಹೊಲಿಗೆಗಳನ್ನು ಹಾಕಿದ್ದಾರೆ. ಆಕೆಯ ಕುಟುಂಬದ ಪ್ರಕಾರ ಯುವತಿಯ ಆರೋಗ್ಯ ಸ್ಥಿರವಾಗಿದ್ದು ಮಾತನಾಡಬಲ್ಲಳು.

ಸಂತ್ರಸ್ತೆಯ ತಂದೆ ಓಜಸ್ವಿ ಕೌಶಲ್ ಅವರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಸಮೇತ ಸೆಕ್ಟರ್ 61 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಮ್ಮ ಮಗಳು ಆರ್ಕಿಟೆಕ್ಟ್ ಪದವೀಧರರಾಗಿದ್ದು, ಸಿವಿಲ್ ಸರ್ವೀಸ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ತಮ್ಮ ಪತ್ನಿ ಮಜೀಂದರ್ ಕೌರ್ ಮತ್ತು ಮಗಳು ಬೀದಿ ನಾಯಿಗಳಿಗೆ ಆಹಾರ ನೀಡಲು ಪ್ರತಿದಿನ ಮಾರುಕಟ್ಟೆಗೆ ಹೋಗುತ್ತಿದ್ದರು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular