HomeKarnatakaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಸಲಹೆ ಆಹ್ವಾನಿಸಿದ 7ನೇ ವೇತನ ಆಯೋಗ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಸಲಹೆ ಆಹ್ವಾನಿಸಿದ 7ನೇ ವೇತನ ಆಯೋಗ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ರಾಜ್ಯ ವೇತನ ಆಯೋಗ ರಚಿಸಲಾಗಿದೆ. ವೇತನ ಆಯೋಗ ತನ್ನ ವರದಿ ನೀಡುವ ಸಂಬಂಧ ಸಲಹೆ, ಅಭಿಪ್ರಾಯ ಕೇಳಿದೆ.

ಸರ್ಕಾರಿ ನೌಕರರು, ಪಿಂಚಣಿದಾರರು, ಸಾರ್ವಜನಿಕರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಇಲಾಖೆಯ ಮುಖ್ಯಸ್ಥರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ವರ್ಗ, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳಿಗೆ ತಮ್ಮ ಅನಿಸಿಕೆ, ಸಲಹೆ ನೀಡುವಂತೆ ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇರೆ ಬೇರೆ ವೃಂದ ನೌಕರರು ತಮಗೆ ನಿಗದಿಪಡಿಸಲಾದ ನಮೂನೆಯಲ್ಲಿ ಉಲ್ಲೇಖಿಸಲಾದ ಪ್ರಶ್ನಾವಳಿಗಳಿಗೆ ಉತ್ತರಿಸಬೇಕು. ತಮ್ಮ ಸಲಹೆ, ಅನಿಸಿಕೆಗಳನ್ನು ಒಳಗೊಂಡ ಉತ್ತರಗಳನ್ನು ಸಂಪೂರ್ಣ ಅಂಚೆ ವಿಳಾಸ, ಇ-ಮೇಲ್ ದೂರವಾಣಿ ಸಂಪರ್ಕ ನಮೂದಿಸಿ ಫೆಬ್ರವರಿ 10ರ ಒಳಗೆ ಕಾರ್ಯದರ್ಶಿ, 7ನೇ ರಾಜ್ಯವೇತನ ಆಯೋಗ, 3ನೇ ಮಹಡಿ, ಔಷಧ ನಿಯಂತ್ರಣ ಇಲಾಖೆಯ ಕಟ್ಟಡ, ಅರಮನೆ ರಸ್ತೆ, ಬೆಂಗಳೂರು -1 ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular