ಬಾಗಲಕೋಟೆ: ಪ್ರಧಾನಿ ಮೋದಿ ಮುಖಂಡತ್ವದಲ್ಲಿ ಚುನಾವಣೆ ಮಾಡುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅಂದ ಮೇಲೆ ರಾಜ್ಯ ಬಿಜೆಪಿಯಲ್ಲಿ ಸಿಎಂ ಬೊಮ್ಮಾಯಿ ಅವರ ಪ್ರಭಾವ ಎಷ್ಟಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮೋದಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎಂದು ಹೇಳುತ್ತಿದ್ದಾರೆ. ಸಿಎಂ ಬೊಮ್ಮಾಯಿ ಪ್ರಭಾವ ಹೇಗಿದೆ ಎಂಬುದು ಅರ್ಥವಾಗುತ್ತಿದೆ ಪ್ರಧಾನಿ ಬಂದು ಇಲ್ಲಿ ಆಡಳಿತ ಮಾಡೋದಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ಗೊಂದಲದ ಗೂಡನ್ನಾಗಿ ಮಾಡಿದ್ದಾರೆ. 2ಡಿ ಮೀಸಲಾತಿಯನ್ನು ಪಂಚಮಸಾಲಿ ಸಮುದಾಯ ತಿರಸ್ಕರಿಸಿದೆ. ಒಕ್ಕಲಿಗರು 2ಸಿ ಮೀಸಲಾತಿ ತಿರಸ್ಕರಿಸಿದ್ದಾರೆ. ಇದೆಲ್ಲವೂ ಚುನಾವಣೆ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರಲಿದೆ ಎಂದು ಹೇಳಿದರು.