
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಘೋಷಿಸಿದ್ದಾರೆ. ಈ ಮೂಲಕ ಜನರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಯೋಜನೆ ಜಾರಿ ಮಾಡಿಲ್ಲ. ಕೊಟ್ಟಿದ್ದ ಭರವಸೆಯನ್ನೇ ಅವರು ಈಡೇರಿಸಿಲ್ಲ. ಈಗ ಹೊಸ ಘೋಷಣೆ ಮಾಡುತ್ತಿದ್ದಾರೆ. ಆದರೆ ನಾವು ಹಾಗೆ ಮಾಡಿಲ್ಲ ನುಡಿದಂತೆ ನಡೆದಿದ್ದೇವೆ. ಘೋಷಣೆ ಮಾಡಿದ ಯೋಜನೆ ಜಾರಿಗೊಳಿಸಿದ್ದೇವೆ ಎಂದರು.

