
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಈಗಾಗಲೇ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯನವರು ಹಾಕಿರುವುದು ಒಂದೇ ಅರ್ಜಿ. ಹಾಗಾಗಿ ಅಂತಿಮವಾಗಿ ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದೇನೆ. ಈ ಬಗ್ಗೆ ತುಂಬಾ ಕ್ಲೀಯರ್ ಆಗಿಯೇ ಹೇಳಿದ್ದೇನೆ ಎಂದರು. ಹೈಕಮಾಂಡ್ ಯಾವ ಕ್ಷೇತ್ರ ಸೂಚಿಸಲಿದೆ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

