
ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಭಾರಿ ಸಿದ್ಧತೆ ನಡೆಯುತ್ತಿದ್ದು, ಇದರ ಮಧ್ಯೆ ಹುಣಸಗಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಪ್ರಧಾನ ಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ, ಅನುದಾನ ರಹಿತ, ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿಗೆ ಯಾದಗಿರಿ ಜಿಲ್ಲಾಧಿಕಾರಿಗಳ ಆದೇಶದಂತೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

