ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಅವರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಂಪಸ್‌ನಲ್ಲಿ ಮತ್ತು ಹಾಸ್ಟೆಲ್ ಕೊಠಡಿಯೊಳಗೆ ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಎರಡೂ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮಹೀಂದ್ರಾ ವಿಶ್ವವಿದ್ಯಾಲಯದ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಪುತ್ರ ಭಗೀರಥ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ದುಂಡಿಗಲ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 341, 323, 504, ಮತ್ತು 506 ಆರ್/ಡಬ್ಲ್ಯು 34 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೊದಲ ವಿಡಿಯೋ ವೈರಲ್ ಆಗಿದ್ದು, ಸಂಸದರ ಪುತ್ರ ಭಗೀರಥ ಎಂದು ಗುರುತಿಸಲಾಗಿದ್ದು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ್ದಾರೆ. ಸಂತ್ರಸ್ತರು ಸಂಸದರ ಪುತ್ರನಿಗೆ ಸಮಸ್ಯೆ ಪರಿಹಾರಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿದ ನಂತರ ಈ ಘಟನೆ ಸಂಭವಿಸಿದೆ. ಸಂಸದರ ಪುತ್ರ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಎರಡನೇ ವೀಡಿಯೋದಲ್ಲಿ ಭಗೀರಥ ವಿದ್ಯಾರ್ಥಿಯ ಹಾಸ್ಟೆಲ್ ಕೋಣೆಯೊಳಗೆ ಹಲ್ಲೆ ಮತ್ತು ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಉಪ ಪೊಲೀಸ್ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿ “ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ ಘಟನೆ ನಡೆದಿದೆ. ಇನ್ನೂ ಯಾವುದೇ ದೂರು ಬಂದಿಲ್ಲ, ವಿಚಾರಣೆಯಲ್ಲಿ ಕಾಲೇಜು ಅಧಿಕಾರಿಗಳು ಹಲ್ಲೆ ನಡೆಸಿದ ವ್ಯಕ್ತಿಯನ್ನು ಸಂಸದರ ಪುತ್ರ ಎಂದು ಗುರುತಿಸಿದ್ದಾರೆ” ಎಂದು ಹೇಳಿದರು.
ದೂರಿನ ನಂತರ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿದ್ದಕ್ಕಾಗಿ ಸಂಸದರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.